ತಂಗಿ ರಜೆಯ ಮೇಲೆ ಭಾರತಕ್ಕೆ ಹೋಗಿದ್ದರಿಂದ ಅವಳ ಮನೆಯಲ್ಲೂ, ನನ್ನ ಮನೆಯಲ್ಲೂ ವಾಸ. ಮಧ್ಯಾಹ್ನ ನಾಲ್ಕು ಘಂಟೆಗೆ ಚಹಾ ಮುಗಿಸಿ ಹೊರಟಾಗ ನನ್ನ ಪತ್ನಿ ಹೇಳಿದಳು ನಮ್ಮನ್ನೂ ಮನೆಗೆ ಬಿಡಿ ಎಂದಳು. ಮಗ ಓಡಿ ಬಂದು ಮುಂದಿನ ಸೀಟಿನಲ್ಲೂ, ಮಗಳು ಹಿಂದಿನ ಸೀಟಿನಲ್ಲೂ ಕೂತರು. ಮಡದಿ ಕೆಲವು ಸಾಮಾನುಗಳನ್ನು ಡಿಕ್ಕಿಯಲ್ಲೂ, ಹಿಂದಿನ ಸೀಟಿನಲ್ಲೂ ಇಡುತ್ತಿದ್ದಳು. ಹಿಂದಿನ ಡೋರ್ ಹಾಕಿದ ಸದ್ದು ಕೇಳುತ್ತಿದ್ದಂತೆ ನಾನು ಕಾರನ್ನು ಚಲಾಯಿಸಿದೆ. ಗಾಡಿ ಚಲಾಯಿಸುತ್ತಾ ಆಫೀಸಿನಲ್ಲಿ ನಡೆದ ತಮಾಷೆಯ ಪ್ರಸಂಗವನ್ನು ಹೇಳುತ್ತಾ ಹೊರಟೆ. ಹಾಂ, ಹೂಂ ಏನೂ ಇಲ್ಲದ್ದನ್ನು ಗಮನಿಸದೆ ನನ್ನ ಪಾಡಿಗೆ ನಾನು ಮಾತನ್ನಾಡುತ್ತಿರುವಾಗ ಫೋನ್ ರಿಂಗ್ ಆಯಿತು, ನೋಡಿದರೆ ನನ್ನ ಹೆಂಡತಿಯ ನಂಬರ್, ಯಾಕ್ ಕಾಲ್ ಮಾಡ್ತಾ ಇದ್ದೀಯ ನನಗೆ ಎನ್ನುತ್ತಾ ಕನ್ನಡಿಯ ಮೂಲಕ ಹಿಂದಕ್ಕೆ ನೋಡಿದರೆ ಗಾಡಿಯಲ್ಲಿ ಅವಳಿಲ್ಲ. ಅರ್ರೇ, ಇದೇನಿದು, ಅವಳು ಕೂತೆ ಇಲ್ಲ, ನಾನು ಗಾಡಿ ಚಲಾಯಿಸುತ್ತಾ ಬಂದೆನಲ್ಲಾ, ಈ ಪುಟಾಣಿಗಳಾದರೂ ಹೇಳಬಾರದೆ ಅಮ್ಮ ಗಾಡಿಯಲ್ಲಿಲ್ಲ ಎಂದು ನನಗೆ ನಾನೇ ಹೊಟ್ಟೆ ತುಂಬಾ ನಗುತ್ತಾ ಹೆಂಡತಿಯನ್ನ ಪಿಕ್ ಮಾಡಲು ಹೋದರೆ ಮುಖ ಕೆಂಪಗೆ ಮಾಡಿಕೊಂಡು ನಿಂತಿದ್ದಳು ನನ್ನನ್ನು ಶಪಿಸುತ್ತಾ. ಅಲ್ಲಾ ಇದೇ ಥರಾ ನನ್ನನ್ನು ಎಲ್ಲಾದರೂ ಡೆಸರ್ಟ್ ನಲ್ಲೋ ಮತ್ತೆಲ್ಲೋ ಬಿಟ್ಟು ಹೋದರೆ ಹೇಗ್ರೀ ಎಂದು ಗದರಿಸುತ್ತಾ ಹತ್ತಿದಳು ಕಾರನ್ನು.
ಹ್ಹ.. ಹ್ಹ.. ಮತ್ತೆ ಮೊಬೈಲ್ ನೆಟ್ವರ್ಕ್ ಇಲ್ಲದ ಕಡೆ ಬಿಟ್ಟು ಬಂದೀರಾ, ಜೋಕೆ! 🙂
-ಪ್ರಸನ್ನ.ಎಸ್.ಪಿ