“ಪಂಚ ಕನ್ಯೆ” ಯರ ವಿದಾಯ

“ಪಂಚ ಕನ್ಯೆ” ಯರ ವಿದಾಯ ಪರಂಪರೆ ಮುಕ್ತಾಯ, ನೇಪಾಳದಲ್ಲಿ.  ಪಂಚ ಕನ್ಯೆಯರು ಎಂದ ಕೂಡಲೇ ಆರತಿ, ಭಾರತಿ, ಮಂಜುಳ, ಕಲ್ಪನ, ಚಂದ್ರಕಲಾ…. ಇವರೇ ನಮ್ಮ ಕನ್ನಡ ನಾಡಿನ ಪಂಚ ಕನ್ನೆಯರೂ……ಎನ್ನೋ ಹಾಡು ನೆನಪಿಗೆ ಬಂದಿರಬೇಕು ಆಲ್ವಾ? ಬಿಟ್ಹಾಕಿ, ಇದು ಆ ಗತಕಾಲದ ನಮ್ಮೆಲ್ಲರ ಮನ ರಂಜಿಸಿದ ಕನ್ನೆಯರ ಕಥೆಯಲ್ಲ, ನಮ್ಮ ದೇಶದ ಉತ್ತರದ ಗಡಿಯಾಚೆಗಿನ ನೇಪಾಳದ ಕನ್ನೆಯರ ವ್ಯಥೆಯ ಕಥೆಯಿದು.

ನೇಪಾಳದ ರಾಷ್ಟ್ರ ನಾಯಕ ಹೊರದೇಶದ ಪ್ರವಾಸ ಹೊರಟಾಗ ಅವರನ್ನು ಬೀಳ್ಕೊಡಲು ಐದು ಕನ್ಯೆಯರನ್ನು ಸಿದ್ಧ ಪಡಿಸಲಾಗುತ್ತಿತ್ತಂತೆ. ದುರ್ಗ, ಸರಸ್ವತಿ, ಲಕ್ಷ್ಮಿ, ರಾಧ, ಅನ್ನಪೂರ್ಣ ಎನ್ನುವ ಯಶಸ್ಸನ್ನು ತರುವ ಈ ದೇವತೆಗಳನ್ನು ಪ್ರತಿನಿಧಿಸುವ ಪಂಚ ಕನ್ಯೆಯರು ಪ್ರವಾಸ ಹೋಗುವ ನಾಯಕನಿಗೆ ಶುಭವಾಗಲು ಮತ್ತು ಸಂಪತ್ತು ಸಿಗಲೆಂದು ಹಾರೈಸಿ ಈ ವ್ಯವಸ್ಥೆ ಮಾಡುತ್ತಿದ್ದರಂತೆ. ಶಾಲೆಗೆ ಹೋಗುವ ಈ ಹೆಣ್ಣು ಮಕ್ಕಳು ಸುಡು ಬಿಸಿಲಿನಲ್ಲಿ ಬೆವರು ಸುರಿಸುತ್ತಾ ನಿಂತು ಅವರಿಗೆ ಶುಭ ಕೋರುವುದನ್ನು ಕಂಡು ಮರುಗಿದ ಅಧ್ಯಕ್ಷರು ಈ ಪರಂಪರೆಗೆ ಮಂಗಳ ಹಾಡಲು ತೀರ್ಮಾನಿಸಿದರಂತೆ.

ಶತಮಾನಗಳಿಂದ ನಡೆದು ಕೊಂಡು ಬರುತ್ತಿದ್ದ ಈ five virgin farewell ಸಮಾರೋಹದ ಪರಂಪರೆಗೆ ನೇಪಾಳದ ಅಧ್ಯಕ್ಷರು ಕೊನೆಗೂ good bye, good riddance ಹೇಳಿ ಸುಡು ಬಿಸಿಲಿನ ಬೇಗೆಯಿಂದ ಕನ್ನೆಯರ ಬಿಡುಗಡೆಗೆ ನಾಂದಿ ಹಾಡಿದರು.

2 thoughts on ““ಪಂಚ ಕನ್ಯೆ” ಯರ ವಿದಾಯ

  1. ರವಿ's avatar ರವಿ ಹೇಳುತ್ತಾರೆ:

    ಹಿಂದೆ ಊರಲ್ಲಿದ್ದಾಗ ಉದಯವಾಣಿಯ ಮಣಿಪಾಲ ಆವೃತ್ತಿಯ ನಾಲ್ಕನೆ ಪುಟ ತಪ್ಪದೆ ಓದುತ್ತಿದ್ದೆ. ಇಂಥ ವಿಷಯವಾಗದ ವಿಷಯಗಳ ಒಂದು ಅಂಕಣ ಇರುತ್ತಿತ್ತು. ಈಗ ನಿಮ್ಮ ಬ್ಲಾಗ್ ಓದುವಾಗ ಆ ಅಂಕಣ ನೆನಪಾಗುತ್ತದೆ. 🙂
    ಆ take pics from net ಮಾತ್ರ ಅರ್ಥ ಆಗಿಲ್ಲ.. ಲೇಖನ ಬರೆಯುವಾಗ ನಿಮಗೋಸ್ಕರ ಮಾಡಿಕೊಂಡ ನೋಟ್ ಇರಬೇಕೆಂದುಕೊಂಡೆ.

Leave a reply to ರವಿ ಪ್ರತ್ಯುತ್ತರವನ್ನು ರದ್ದುಮಾಡಿ