ಸೊಗಸಾದ ಲೇಖನ. ಇಂಥ ಹುಲಿಗಳು ಈಗ ಕಡಿಮೆ, ಅಥವಾ extinct.
ಮೈಸೂರಿನಲ್ಲಿ ನಾವು ಕಾಲೇಜು ಕಲಿಯುತ್ತಿದ್ದಾಗ ಒಂದು ಹುಲಿ ಒಂದೇ ಹಾಳೆಯ ಪತ್ರಿಕೆಯೊಂದನ್ನು ನಡೆಸುತ್ತಿತ್ತು.ಪತ್ರಿಕೆಯ ಹೆಸರು ‘ಹುಲಿ ಪತ್ರಿಕೆ’. ಸಂಪಾದಕರು ತಮ್ಮ ನಿಜದ ಹೆಸರನ್ನು ಎಲ್ಲೂ ಹಾಕುತ್ತಿರಲಿಲ್ಲ.ಬದಲಾಗಿ ತಮ್ಮನ್ನು ‘ಹುಲಿ’ ಎಂದೇ ಎಲ್ಲ ಕಡೆಯೂ ಕರೆದುಕೊಳ್ಳುತ್ತಿತ್ತು.ಆಗ ಮೈಸೂರಿನಲ್ಲಿ ಸಣ್ಣ ಪತ್ರಿಕೆಗಳದೇ ಕಾಲ.ಸಿಟ್ಟು ಬಂದರೆ ಒಂದು ಪತ್ರಿಕೆ. ಪ್ರೀತಿ ಹುಟ್ಟಿದರೆ ಇನ್ನೊಂದು ಪತ್ರಿಕೆ, ವಿರಹ ಉಂಟಾದರೆ ಒಂದು ಸಣ್ಣ ಪ್ರಿಂಟಿಂಗ್ ಪ್ರೆಸ್ಸು. ಹೀಗೆ ತರಹಾವರಿ ಪತ್ರಿಕೋಧ್ಯಮ ಸಾಹಸಗಳಿಗೆ ಹೆಸರು ವಾಸಿಯಾಗಿದ್ದ ಆ ಕಾಲದಲ್ಲಿ ಹುಲಿಯೂ ಕೂಡಾ ಪತ್ರಿಕೆಯೊಂದನ್ನು ನಡೆಸುತ್ತಿದೆ ಎಂಬುದು ನಮಗೆ ಅಂತಹ ದೊಡ್ಡ ಅಚ್ಚರಿಯನ್ನೇನೂ ಉಂಟು ಮಾಡುತ್ತಿರಲಿಲ್ಲ.ಕೈಯಲ್ಲಿ ಸ್ವಲ್ಪ ಕಾಸಿದ್ದರೆ ನಾವೂ ಕೂಡಾ ಅಂತಹದೊಂದು ಸಾಹಸವನ್ನು ನಡೆಸುತ್ತಿದ್ದೇವೋ ಏನೋ ಆದರೆ ಅಪ್ಪ ಕಳಿಸುತ್ತಿದ್ದ ಹಣ ಹಾಸ್ಟೆಲಿನ ಮೆಸ್ಸು ಬಿಲ್ಲಿಗೆ ಮಾತ್ರ ಆಗುತ್ತಿದ್ದುದರಿಂದ ಅಳಿದುಳಿದ ಮೊತ್ತದಲ್ಲಿ ಬೈಟೂಟೀ ಕುಡಿಯುತ್ತಾ ಹುಲಿ ಪತ್ರಿಕೆಯನ್ನು ಓದುತ್ತಾ ಕಾಲ ಕಳೆಯುತ್ತಿದ್ದೆವು.
ಆ ಪತ್ರಿಕೆಯ ಹೆಡ್ಡಿಂಗುಗಳೂ ರೋಚಕವಾಗಿರುತ್ತಿದ್ದವು.‘ಹುಲಿ ಸಂಚಾರ’ ‘ಹುಲಿಯ ಸಿಟ್ಟು’ ‘ಹುಲಿ ಗರ್ಜನೆ’ ಇತ್ಯಾದಿಗಳ ನಡುವೆ ‘ಹುಲಿ ವಿಷಾದಿಸುತ್ತದೆ’ ‘ಹುಲಿಗೆ ಬೇಕಾಗಿದ್ದಾರೆ’ ಮೊದಲಾದ ಪ್ರಕಟಣೆಗಳೂ ಇರುತ್ತಿದ್ದವು.ಆ ಎರಡು ಪುಟಗಳ ಪತ್ರಿಕೆಯ ಎಲ್ಲ ವರದಿಗಳೂ, ಸಂಪಾದಕೀಯವೂ, ಪ್ರಕಟಣೆಯೂ ಜಾಹೀರಾತೂ ಹೀಗೆ ಎಲ್ಲವೂ ಸಾಕ್ಷಾತ್ ಹುಲಿಯೇ ಯಾರೋ ನರಮನುಷ್ಯನಾದ ಉಪ ಸಂಪಾದಕನೊಬ್ಬನ ಕೈಲಿ ಹೇಳಿ ಬರೆಸಿದಂತೆ ಓದಿಸಿಕೊಂಡು ಸಖತ್ ಮಜಾ ನೀಡುತ್ತಿತ್ತು.
‘ಈ ದಿನ ಹುಲಿಯು ಮೈಸೂರಿನ ಅಠಾರಾ ಕಚೇರಿಯನ್ನು ಒಂದು ಸುತ್ತು ಹಾಕಿ ಬಂದಿತು.ಅಲ್ಲಿ ಕಂಡ ದೃಶ್ಯಗಳಿಂದಾಗಿ ಹುಲಿಗೆ ತುಂಬಾ ಸಿಟ್ಟು ಬಂದಿತ್ತು.ಇದು ಹೀಗೇ ಮುಂದುವರಿದರೆ ಹುಲಿಯು ಇನ್ನು ಸುಮ್ಮನಿರಲು ಸಾಧ್ಯವಿಲ್ಲ…
View original post 453 more words