ಅಹಮದಾಬಾದಿನಲ್ಲಿ ಬಾಳ ಗೆಳೆಯ /ತಿ ಯರನ್ನು ಕಂಡುಕೊಳ್ಳುವ ಒಂದು ಮೇಳವಂತೆ. ಬದುಕಿನ ಸಂಜೆಯಲ್ಲಿರುವವರು ಬದುಕಿನ ಒಂದಿಷ್ಟು ಪ್ರಕಾಶವನ್ನು ತಮ್ಮ ಬಾಳಿನೊಳಕ್ಕೆ ಬಿಟ್ಟು ಕೊಳ್ಳಲು ಸದವಕಾಶ. ಇದರಲ್ಲೇನು ವಿಶೇಷ? ವಿಶೇಷ ಇದೆ. ಇವರುಗಳು ಮದುವೆಯಾಗೋಲ್ಲವಂತೆ. “ಲಿವ್ ಇನ್” ಅಂತೆ. ಅಡುಗೆ ಚೆನ್ನಾಗಿದೆಯೋ ಇಲ್ಲವೋ ಎಂದು ನೋಡುವ tastiing ಥರ. ಅಮೇರಿಕನ್ ಅಥವಾ ಪಾಶ್ಚಾತ್ಯ ಸ್ಟೈಲ್ ಅಂತೆ. ಹೌದು. ಆಧುನಿಕ ಬದುಕಿಗೆ ಬರ್ಗರ್, ಬಾಸ್ಕಿನ್ ರಾಬಿನ್ಸ್, ಜೀನ್ಸ್ ಅನಿವಾರ್ಯ ಆಗೋದಾದರೆ ಹೆಣ್ಣು ಗಂಡಿನ ನಡುವಿನ ಬಂಧವೂ, ಬದುಕುವ ರೀತಿಯೂ ಅವರ ಹಾಗೇ ಯಾಕಾಗಕೂಡದು? ಎಲ್ಲಿಯವರೆಗೆ ನಾವು ಪಾಶ್ಚಾತ್ಯರನ್ನು ಅನುಕರಿಸ ಬಹುದು ಎನ್ನುವದು ಕಠಿಣ ಪ್ರಶ್ನೆ.
ಅಸ್ಸಾಂ, ಕರ್ನಾಟಕ, ಗುಜರಾತ ರಾಜ್ಯಗಳಿಂದ ಬಂದಿದ್ದರಂತೆ ಜನ ಈ ಮೇಳದಲ್ಲಿ ಪಾಲುಗೊಳ್ಳಲು. ಒಂದು ರೀತಿಯ ಸಾಮೂಹಿಕ ಸ್ವಯಂವರ. ಈ ಅನಿಷ್ಠಕರ ಬೆಳವಣಿಗೆಯನ್ನು ಧಾರ್ಮಿಕ ನಾಯಕರುಗಳು ವಿರೋಧಿಸುವುದು ದೇಶದ, ಸಂಸ್ಕೃತಿಯ ಹಿತದೃಷ್ಟಿಯಿಂದ ಒಳ್ಳೆಯದು. ಇಂದು ಲಿವ್ ಇನ್, ನಾಳೆ three some ಮಟ್ಟಕೆ ಇಳಿಯಬಾರದು ಸಂಬಂಧಗಳು.
ಮೇಲಿನ ಹೊಸ ಸಂಪ್ರದಾಯವನ್ನು ವಿರೋಧಿಸಿದ ವ್ಯಕ್ತಿಯೊಬ್ಬ ಹೇಳಿದ. ಹಿರಿಯರು ಈ ರೀತಿಯ ಸಂಬಂಧಗಳನ್ನು ಇಷ್ಟ ಪದುವುದಾದರೆ ನಾಳೆ ದಿನ ಕಿರಿಯರೂ ಅದನ್ನೇ ಬಯಸಬಹುದು. ಅವರೇಕೆ ತಾನೇ ಬಯಸಬಾರದು? ತಮ್ಮ ಅಜ್ಜ ಅಥವಾ ಅಜ್ಜಿ ಬಯಸಿದ್ದು ತನಗೂ ಇರಲಿ ಎಂದರೆ ತಡೆಯಲು ಸಾಧ್ಯವೇ ಅಥವಾ ತಡೆಯುವುದು ತರವೇ?