ಮಕ್ಕಳ ಹತ್ತು ಹಲವು ಕುತೂಹಲಗಳಲ್ಲಿ ಒಂದು ಮಕ್ಕಳು ಹೇಗೆ ಹುಟ್ಟುತ್ತವೆ ಎಂದು. ನಾನ್ಹೇಗೆ ಬಂಡೆ ಎನ್ನುವ ಈ ಮಕ್ಕಳ ಪ್ರಶ್ನೆ ನಮ್ಮನ್ನು ತಬ್ಬಿಬ್ಬು ಮಾಡುವುದು ಸಹಜವೇ. ಐದನೇ ಕ್ಲಾಸಿನಲ್ಲಿದ್ದಾಗ ನನ್ನ ಪೋಲಿ ಗೆಳೆಯನೊಬ್ಬ ವಿವರವಾಗಿ ತಿಳಿಸಿ ಹೇಳಿದರೂ ತಂದೆ ತಾಯಿ ಬಗೆಗಿನ ಅಪಾರವಾದ ಗೌರವ ಅವನ ಕಥೆಯನ್ನೂ ನಂಬದಂತೆ ತಡೆದಿತ್ತು. ನಾನು ಅಂದು ಕೊಂಡಿದ್ದು ಮಕ್ಕಳು ಬೇಕೆಂದಾಗ ತಂದೆ ತಾಯಿಗಳು ದೇವರಲ್ಲಿ ಕೇಳಿ ಕೊಳ್ಳುತ್ತಾರೆ ಮತ್ತು ಆ ಕರುಣಾಮಯನಾದ ದೇವರು ಮಕ್ಕಳನ್ನು ಕರುಣಿಸುತ್ತಾನೆ ಎಂದು, ಆದರೆ ಮೇಲೆ ಹೇಳಿದಂಥ ಪೋಲಿ ಪೋಕರಿಗಳು ವಕ್ಕರಿಸಿ ಹಾಗಲ್ಲ ಕಣೋ ಬೆಪ್ಪೆ ಹೀಗೆ ಎಂದು ಸವಿವರವಾಗಿ ಹೇಳಿದಾಗ ಅಪ್ಪ ಅಮ್ಮನ ನನ್ನು ಸಂಶಯ ದಿಂದ ನೋಡುವಂತಾಗುತ್ತಿತ್ತು.
ಈ ಚಿತ್ರ ನೋಡಿ. ಜರ್ಮನಿ ದೇಶದಲ್ಲಿ ಮಕ್ಕಳು ಹೇಗೆ ಬರುತ್ತಾರೆ ಎಂದು ಮಕ್ಕಳಿಗೆ ತಿಳಿ ಹೇಳಲು ಪುಸ್ತಿಕೆಗಳು. ಅದರಲ್ಲಿನ ಒಂದು ದೃಶ್ಯ ನೀವೀಗ ನೋಡುತ್ತಿರುವುದು.
