ಜೀರುಂಡೆ ಯನ್ನು ಹಿಡಿದು ಕೊಂಡು ಗೂಡು ಸೇರಿದ ಈ ಬೆಟ್ಟದ ನೀಲಿ ಹಕ್ಕಿ (mountain bluebird), ಮನಸ್ಸು ಬದಲಾಯಿಸಿ ಜೀರುಂಡೆ ಯನ್ನು ಹೆಕ್ಕಿ ಹೊರ ಹಾರಲು ತಯಾರಾಗಿ ನಿಂತಿದ್ದಾನಂತೆ. ಎಷ್ಟು ಛಾನ್ದ್ ಅದಾನ್ ನೋಡಿ ಇವ. ಅಲ್ವರ? ಇವ ‘ಇವನೋ’ ‘ಇವಳೋ’ ಅಂತ ನಿಂಗೆನ್ಗೊತ್ತು ಅಂತಾ ಮಾತ್ರ ಕೇಳ್ಬ್ಯಾಡಿ, ಹೀಗೇ ಜೇಡನ ಗುಡಿಸಲು ಗುಡಿಸುವಾಗ ಎಡವಿದ ತಾಣದಲ್ಲಿ ಇದರ ಉಲ್ಲೇಖ ಇತ್ತು, ವಿಧೇಯತೆಯಿಂದ ಭಟ್ಟಿ ಇಳಿಸಿದ್ದೇನೆ. Lee Rentz ರವರ “ನಿಸ (ಸ್ವ)ರ್ಗ’ ಸೀಮಿತ ಬ್ಲಾಗಿನಲ್ಲಿ ಕಂಡದ್ದನ್ನು ದಾಖಲಿಸಿದ್ದೇನೆ. ಈ ಬ್ಲಾಗ್ ನಲ್ಲಿ ಅದ್ಭುತವಾದ ಚಿತ್ರಗಳಿವೆ, ನಿಸರ್ಗದ ಬಗೆಗಿನ ಪ್ರೀತಿ, ಆದರ ಉಕ್ಕಿ ಹರಿಯುತ್ತಿದೆ. ನಾವು ದೂರ ಹೋಗೋ ಮಾತಿರಲಿ, ಹಿತ್ತಲಿನ ಸೌಂದರ್ಯವನ್ನು ಆಸ್ಥೆಯಿಂದ ಗಮನಿಸಿದ್ದೇವೆಯೇ? ದಾಖಲಿಸಿದ್ದೇವೆಯೇ?
pic courtesy: http://leerentz.wordpress.com/2011/06/09/wenas-audubon-campout-chasing-birds-and-grasshoppers/
